ಬಂಟ್ವಾಳ: ಬಂಟ್ವಾಳ ಅಗ್ನಿಶಾಮಕ ಠಾಣೆಯ ಮೀರ್ ಮೊಹಮ್ಮದ್ ಗೌಸ್ ಅವರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕ 1244 ಆಗಿರುವ ಅವರು ದ.ಕ.ಜಿಲ್ಲೆಯಿಂದ ಈ ಬಾರಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ವ್ಯಕ್ತಿಯಾಗಿದ್ದಾರೆ.
ಆ. ೧೫ಕ್ಕೆ ಬೆಂಗಳೂರಿನಲ್ಲಿ ಅವರು ರಾಜ್ಯಪಾಲರಿಂದ ಗೌರವ ಸ್ವೀಕರಿಸಲಿದ್ದು, ಪ್ರಶಸ್ತಿ ಪ್ರದಾನ ದಿನಾಂಕ ಇನ್ನಷ್ಟೆ ನಿಗದಿಯಾಗಬೇಕಿದೆ.
