ಬಂಟ್ವಾಳ : ತಾಲ್ಲೂಕಿನ ಬಿಜೆಪಿ ರೈತ ಮೋರ್ಚಾ ವತಿಯಿಂದ ಮಂಗಳವಾರ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸಮಾರೋಪ ಭಾಷಣ ಮಾಡಿದರು.24btl-BJPದೇಶದಲ್ಲಿ ಶೇ ೭೦ರಷ್ಟು ಮಂದಿ ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಮುಕ್ತ ಮಾರುಕಟ್ಟೆ ಒದಗಿಸಿ ಆರ್ಥಿಕವಾಗಿ ಸದೃಢಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಕೃಷಿ ಕಾಯ್ದೆಗೆ ರೈತರ ಹೆಸರಿನಲ್ಲಿ ಕಮಿಷನ್ ದಂಧೆ ನಡೆಸುತ್ತಿರುವವರು ವಿರೋಧಿಸುತ್ತಿದ್ದಾರೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಗೀತಾಂಜಲಿ ಸಭಾಂಗಣದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಮಂಗಳವಾರ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ರೈತರ ವಿಶ್ವಾಸಗಳಿಲು ಸ್ವತಃ ಅವರ ಮನೆಗಳಲ್ಲೇ ರೈತ ಮೋರ್ಚಾ ಸಭೆ ನಡೆಸಬೇಕು ಎಂದರು.

ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಳಿಕೆ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ಚಿದಾನಂದ ರೈ, ಪ್ರಮುಖರಾದ ಮಾಧವ ಎಸ್.ಮಾವೆ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ ಮಜಲು, ಬಂಟ್ವಾಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಸಜಿಪ ಮತ್ತಿತರರು ಇದ್ದರು. ಬಂಟ್ವಾಳ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಸ್ವಾಗತಿಸಿ, ಪ್ರಣಾಮ್ ಅಜ್ಜಿಬೆಟ್ಟು ವಂದಿಸಿದರು.

By Suddi9

Leave a Reply

Your email address will not be published. Required fields are marked *