ನವದೆಹಲಿ: ವಿಶ್ವಾದ್ಯಂತ ಸುದ್ದಿಯಾಗಿದ್ದ ಕರ್ನಾಟಕದ ಹಿಜಬ್‌ ನಿಷೇಧ(Karnataka Hijab Ban) ಪ್ರಕರಣ ಇನ್ನಷ್ಟು ದಿನಗಳ ಕಾಲ ನಡೆಯಲಿದೆ. ಸುಪ್ರೀಂ ಕೋರ್ಟ್‌ನಿಂದ(Supreme Court) ಭಿನ್ನ ತೀರ್ಪು ಪ್ರಕಟವಾಗಿದ್ದು ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಾಧೀಶರು ಇರುವ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಶಾಲೆ-ಕಾಲೇಜುಗಳ ತರಗತಿ ಒಳಗಡೆ ಹಿಜಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮೂರು ವಾರಗಳ ಹಿಂದೆ ತೀರ್ಪನ್ನು ಕಾಯ್ದಿರಿಸಿತ್ತು. ಸೆಪ್ಟೆಂಬರ್ 22ರವರೆಗೂ ನಿರಂತರವಾಗಿ 10 ದಿನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಾದ- ಪ್ರತಿವಾದ ಆಲಿಸಿ ಇಂದು ತೀರ್ಪು ಪ್ರಕಟಿಸಿದೆ.

By Suddi9

Leave a Reply

Your email address will not be published. Required fields are marked *