ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಮೊಡಂಕಾಪು ಇನ್ಫೆಂಟ್ ಜೀಸಸ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಕ್ಕೆ ಮೊಡಂಕಾಪು ಚರ್ಚಿನ ಧರ್ಮಗುರು ವಲೇರಿಯನ್ ಡಿಸೋಜ ಚಾಲನೆ ನೀಡಿದರು. ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರರು ಇದ್ದಾರೆ.


ಕ್ರೀಡೆಯಿಂದ ದೇಹಕ್ಕೆ ಆರೋಗ್ಯದ ಜೊತೆಗೆ ಬುದ್ಧಿಮತ್ತೆ ವೃದ್ಧಿ ಮತ್ತು ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಮೊಡಂಕಾಪು ಇನ್ಫೆಂಟ್ ಜೀಸಸ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಚಾಲಕಿ ಧನಭಾಗ್ಯ ಆರ್. ರೈ ಧ್ವಜಾರೋಹಣ ನೆರವೇರಿಸಿದರು.

ಮೊಡಂಕಾಪು ಚರ್ಚಿನ ಧರ್ಮಗುರು ವಲೇರಿಯನ್ ಡಿಸೋಜ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶಾಲೆ ಆಡಳಿತಾಧಿಕಾರಿ ಮಹಾಬಲ ಆಳ್ವ. ಟ್ರಸ್ಟಿ ರಶ್ಮಿ ಎಸ್. ಪೂಂಜ, ಸುಮ ಎಂ. ಆಳ್ವಾ, ಮುಖ್ಯಶಿಕ್ಷಕಿ ಸುನಿತಾ ಬಿ.ಟಿ., ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಶಿಕ್ಷಣ ಸಂಯೋಜಕಿ ಸುಜಾತ, ಪ್ರಮುಖರಾದ ಸುಧಾ, ವಿಷ್ಣು ನಾರಾಯಣ ಹೆಬ್ಬಾರ್, ನಂದಾ, ಪ್ರೇಮಲತಾ, ಪ್ರದೀಪ್, ರತ್ನಾವತಿ, ಶಿವಪ್ರಸಾದ್ ರೈ, ನವೀನ್, ಸುಮನಾ, ಸನ್ಮಿತಾ, ಹರ್ಷಿತ್ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *