ಕೈಕಂಬ: ಶ್ರೀ ಕಾವೇಶ್ವರ ದೇವಸ್ಥಾನ ಬೆಳ್ಳೂರಿನಲ್ಲಿ ಮಾ.8ರಂದು ಶುಕ್ರವಾರ ಶ್ರೀ ಕಾವೇಶ್ವರ ದೇವರಿಗೆ ರಂಗಪೂಜೆ ನೆರವೇರಲಿದೆ.

ಶಿವರಾತ್ರಿಯ ಪ್ರಯುಕ್ತ ದೇವಳದಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಈ ಕಾರ್ಯಕ್ರಮವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ಇವರ ಗೌರವ ಉಪಸ್ಥಿತಿಯಲ್ಲಿ ಅರ್ಚಕ ರಘುರಾಮ್ ಮಯ್ಯ ದೀಪ ಬೆಳಗಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸಂಜೆ 7:30ಕ್ಕೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ “ಶಿವಲೀಲಾಮೃತ” ಎನ್ನುವ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಶ್ರೀ ಕಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
