ಬಂಟ್ವಾಳ :. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇವುಗಳ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ  ನಡೆಯಿತು.ಕಾರ್ಯಕ್ರಮದ  ಅಧ್ಯಕ್ಷತೆಯನ್ನು  ಶಾಲಾ ಸಹ ಶಿಕ್ಷಕಿಯಾದ ಕವಿತಾ ರವರು ವಹಿಸಿದ್ದರು.


ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿ  ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ವಿದ್ಯಾರ್ಥಿಗಳಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಹೇಳಿದರು‌


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣರವರು ಕಾರ್ಯಕ್ರಮದ ಉದ್ದೇಶ, ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತು ಗಳ ಬಗ್ಗೆ ಮಾಹಿತಿ ನೀಡಿದರು. 
ಸಂಪನ್ಮೂಲ ವ್ಯಕ್ತಿ   ಆರ್ .ಕೆ .ಎಸ್ .ಕೆ ಕೌನ್ಸಿಲರ್ ತಾಲೂಕು ಆಸ್ಪತ್ರೆ ಬಂಟ್ವಾಳದ ಅಕ್ಷತಾ  ಮದ್ಯಪಾನ ,ಧೂಮಪಾನ ಮತ್ತು ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಲೆ, ಸಾಮಾಜಿಕ, ಆರ್ಥಿಕ, ಕೌಟುಂಬಿಕವಾಗಿ  ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿಸಿದರು.ಆರೋಗ್ಯ ಮಿತ್ರ ಉಷಾ  ಆಯುಷ್ಮಾನ್ ಕಾರ್ಡಿನ ಸೌಲಭ್ಯದ ಬಗ್ಗೆ   ಮಾಹಿತಿ ನೀಡಿದರು .


ವಿ ಎಲ್ ಇ ವಸಂತಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ  ಸಂಕಲ್ಪದ ಪ್ರತಿಜ್ಞೆಯನ್ನು ಬೋಧಿಸಿದರು. ಜನ ಜಾಗೃತಿ  ತಾಲೂಕು ಸದಸ್ಯ ಶ್ರೀನಿವಾಸ್ ಶೆಣೈ,ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಕುಲಾಲ್ ಉಪಸ್ಥಿತರಿದ್ದರು.

ಸಹ ಶಿಕ್ಷಕಿ ಜಯಶ್ರೀ ಕೆ  ಸ್ವಾಗತಿಸಿ, ಸೇವಾ ಪ್ರತಿನಿಧಿ ಪ್ರಪುಲ್ಲ ವಂದಿಸಿದರು.  ಮೇಲ್ವಿಚಾರಕಿ ರೂಪ ಜೆ ರೈ ಕಾರ್ಯಕ್ರಮ ನಿರೂಪಿಸಿದರು 

By Suddi9

Leave a Reply

Your email address will not be published. Required fields are marked *