ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ.) ಬಂಟ್ವಾಳ ತಾಲೂಕು ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಾಮದಪದವು, ಪ್ರೇರಣಾ ಜ್ಞಾನ ವಿಕಾಸ ಕೇಂದ್ರ ವಾಮದಪದವು ಇದರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ವಾಮದಪದವಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಜನಜಾಗೃತಿ ವೇದಿಕೆ ಸದಸ್ಯರಾದ ಹರೀಂದ್ರ ಪೈ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿಯ ನಿರ್ದೇಶಕರಾದ ಮಹಾಬಲ ಕುಲಾಲ್ ಮಾತನಾಡಿ ಇಂತಹ ಕಾರ್ಯಕ್ರಮಗಳು ನಮ್ಮ ಮೂಲ ಸಂಸ್ಕೃತಿಯನ್ನು ಇಂದಿನ ಜನಾಂಗಕ್ಕೆ ತಿಳಿಸಲು ಸಹಕಾರಿಯಾಗಿದೆ ಎಂದರು.
ಬಂಟ್ವಾಳ ತಾಲೂಕು ಕೃಷಿ ಅಧಿಕಾರಿ ಭಾಸ್ಕರ್,ವಾಮದಪದವು ನೀಲಕಂಠೇಶ್ವರ ದೇವಸ್ಥಾನದ ಮುಖ್ಯಸ್ಥರಾದ ಗೋಪಾಲಕೃಷ್ಣ ಚೌಟ, ಬಂಟ್ವಾಳ ಸಾಂತ್ವನ ಕೇಂದ್ರದ ಆಪ್ತ ಸಂಯೋಜಕರಾದ ವಿದ್ಯಾ ಒಕ್ಕೂಟದ ಅಧ್ಯಕ್ಷರಾದ ಅನಿತಾ ಪ್ರಭು, ವಗ್ಗ ವಲಯ ಮೇಲ್ವಿಚಾರಕರಾದ ಸವಿತಾ,ಜ್ಞಾನವಿಕಾಸ ಕೇಂದ್ರದ ಸಂಯೋಜಕಿಗುಣವತಿ , ಸೇವಾ ಪ್ರತಿನಿಧಿಗಳಾದ ಮೋಹನ್ ದಾಸ್ ಗಟ್ಟಿ, ಮಾಧವ ಭಾರತಿ ತಾರಾನಾಥ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಕವಿತಾ ವಂದಿಸಿದರು,ಶಿವರಾಜ್ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.
