ದಿಲ್ಲಿ: ಮುಖ್ಯಮಂತ್ರಿ ಆದ ನಂತರ ಇದೇ ಮೊದಲ ಬಾರಿಗೆ ಕುಮಾರಸ್ವಾಮಿ ಅವರು ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದರು.
ದಿಲ್ಲಿಯ ಲೋಕಕಲ್ಯಾಣ ಮಾರ್ಗದಲ್ಲಿನ ಪ್ರಧಾನ ಮಂತ್ರಿ ಅವರ ನಿವಾಸದಲ್ಲಿ ಮೋದಿ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು ಕೆಲವು ಸಮಯಗಳ ಕಾಲ ಚರ್ಚೆ ಮಾಡಿದರು.
ಮೋದಿ ಅವರೊಂದಿಗೆ ರೈತರ ಸಮಸ್ಯೆ, ಕಲ್ಲಿದ್ದಲು ಸಮಸ್ಯೆ ಸೇರಿದಂತೆ ಇನ್ನೂ ಕೆಲವು ರಾಜ್ಯದ ಪ್ರಸ್ತುತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ಕುಮಾರಸ್ವಾಮಿ ಅವರು ಹೇಳಿದರು.
‘ಆಡಳಿತದ ವಿಚಾರವಾಗಿ ಮೋದಿ ಅವರು ಉಪಯುಕ್ತ ಸಲಹೆಗಳನ್ನು ಮೋದಿ ಅವರು ನೀಡಿದರು, ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದರು.

