ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ ಕಟ್ಟಡವೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ಇಬ್ಬರು ಶಿಕ್ಷಕಿಯರು ಗಾಯಗೊಂಡ ಘಟನೆ ತಾಲೂಕಿನ ಕುಂದಾಪುರ ಗ್ರಾಮದಲ್ಲಿನ ಶ್ರೀ ನಾರಾಯಣಗುರು ಶಾಲೆಯಲ್ಲಿ ನಡೆದಿದೆ.
ಗಾಯಾಳು ಶಿಕ್ಷಕಿಯರನ್ನು ಮಮತಾ, ತುಳಸಿ ಎಂದು ಗುರುತಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಬೆಳಿಗ್ಗೆ ಬಾರೀ ಮಳೆ ಬೀಳುತಿತ್ತು ಎಂದಿನಂತೆ ಶಿಕ್ಷಕರು ಬೆಳಿಗ್ಗೆ ಶಾಲೆಗೆ ಬಂದಿದ್ದರು. ಮಳೆ ಬೀಳುತ್ತಿದ್ದರಿಂದ ವಿದ್ಯಾರ್ಥಿಗಳು ತಡವಾಗಿ ಶಾಲೆಗೆ ಬಂದಿದ್ದರಿಂದ ಬಾರಿ ಅನಾಹುತ ತಪ್ಪಿದೆ.
