06c28df6f5eb66ecdbb7e45e01573a83

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಉಭಯ ಪಕ್ಷಗಳ ನಾಯಕರು ಖಾತೆ ಹಂಚಿಕೆ ಸಂಬಂಧ ಒಮ್ಮತಕ್ಕೆ ಬಂದಿದ್ದು, ನಾಳೆ ಸಂಜೆಯೊಳಗೆ ಅಂತಿಮ ನಿರ್ಧಾರ ಕೈಕೊಲಾಲಾಗುವುದು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾಳೆ ಸಂಜೆಯೊಳಗೆ ಸಚಿವರ ಪ್ರಮಾಣವಚನಕ್ಕೆ ಸಮಯ ನಿಗದಿಪಡಿಸುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್‍ಗೆ 20 ಜೆಡಿಎಸ್‍ಗೆ 10 ಸಚಿವ ಸ್ಥಾನಗಳನ್ನು ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. 30 ಸಚಿವರನ್ನು ಒಂದೇ ಹಂತದಲ್ಲಿ ಸಂಪುಟಕ್ಕೆ ತೆಗೆದುಕೊಳ್ಳಬೇಕೇ ಅಥವಾ ಎರಡು ಹಂತದಲ್ಲಿ ತೆಗೆದುಕೊಳ್ಳಬೇಕೇ ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

By suddi9

Leave a Reply

Your email address will not be published. Required fields are marked *