Accident-2

ಕಲಬುರಗಿ: ಎರಡು  ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಶಿಕ್ಷಕಿಯರು ಸೇರಿ ನಾಲ್ವರು ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕು ಕ್ರಿಡಾಂಗಣದ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಚಿಗರತಿಹಳ್ಳಿ ಸರ್ಕಾರಿ ಶಾಲಾ ಶಿಕ್ಷಕಿ ಆಯಿಶಾ ಸಿದ್ದೀಕಿ, ಫರೀನ್ ಬೇಗಂ ಹಾಗೂ ಯಾಳವಾರ ಸರ್ಕಾರಿ ಶಾಲೆಯ ಸಹರಾ ಕಲತೂನ್  ಹಾಗೂ ಚಾಲಕ ರುಕ್ಕಯ್ಯ ಎಂದು ಗುರುತಿಸಲಾಗಿದೆ.

ಕಲಬುರಗಿಯಿಂದ ದಾವಣಗೆರೆ ಹಾಗೂ ಯಾದಗಿರಿ ಜಿಲ್ಲೆಯ ಶಹಾಪೂರನಿಂದ ಕಲಬುರಗಿಗೆ ಬರುತ್ತಿದ್ದ ಬಸ್ ಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ಗಾಯಳುಗಳನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

By suddi9

Leave a Reply

Your email address will not be published. Required fields are marked *