ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ತಾಲೂಕಿನ ಎಸ್ ವಿಎಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಇಮ್ತಿಯಾಜ್ ಉದ್ಘಾಟಿಸಿದರು.
ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ವೈ. ಮೋಟಾರು ವಾಹನ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ನಂದಿನಿ ಬಾಯಿ, ಶಿಕ್ಷಣ ಸಂಯೋಜಕ ಸುಕುಮಾರ್, ಎಸ್.ವಿ.ದೇವಳ ಆಡಳಿತ ಮೊಕ್ತೇಸರ ಪ್ರವೀಣ್ ಕಿಣಿ, ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ದ.ಕ.ಕೇಂದ್ರ ಸರಕಾರಿ ವಕೀಲರಾದ ಪ್ರಸಾದ್ ಕುಮಾರ್ ರೈ, ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ವಕೀಲರುಗ ಳಾದ ಅಜಿತ್ ಕುಮಾರ್ ಅಡ್ಡೂರು, ಶ್ರೀಧರ್ ಪೈ, ವೆಂಕಟ್ರಮಣ ಶಣೈ, ಸತೀಶ್.ಬಿ , ಯಶೋಧ, ಆಶಾಮಣಿ.ಡಿ.ರೈ, ವಿನೋದ ಎ.ಎಸ್., ಶೈಲಜಾ ರಾಜೇಶ್ ಉಪಸ್ಥಿತರಿದ್ದರು.
ನ್ಯಾಯವಾದಿ ಗಣೇಶ್ ಪೈ ಸ್ವಾಗತಿಸಿದರು. ಶಿಕ್ಷಕ ಶಿವಾನಂದ ಬಾಳಿಗಾ ವಂದಿಸಿದರು. ಉಪಾಧ್ಯಕ್ಷ ಚಂದ್ರಶೇಖರ ಪುಂಚಮೆ ಕಾರ್ಯಕ್ರಮ ನಿರೂಪಿಸಿದರು.


