ಸಾಗರ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಹಾಗೂ ಸರ್ಕಾರಿ ಬಸ್ ನಿಲ್ದಾಣದ ಕಾಮಗಾರಿ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಸಾಗರದಲ್ಲಿ ನಡೆದಿದೆ.
ಭುವನ್ (5) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ನಗರದ ಕೆಎಸ್ಸಾರ್ಟಿಸಿ ಡಿಪೋ ಪಕ್ಕದಲ್ಲಿಯೇ ಕೆಎಸ್ಸಾರ್ಟಿಸಿ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, ಪಿಲ್ಲರ್ ನಿರ್ಮಾಣಕ್ಕಾಗಿ ಆಳದ ಗುಂಡಿಗಳನ್ನು ತೆರೆಯಲಾಗಿತ್ತು. ಮಳೆ ಬಂದು ಈ ಗುಂಡಿಗೆ ನೀರು ತುಂಬಿಕೊಂಡಿತ್ತು. ಆಟವಾಡುತ್ತ ಬಂದ ಭುವನ್ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸದಂತೆ ಗುತ್ತಿಗೆದಾರನ ವಿರುದ್ಧ ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

