ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯವಾದಿ ಮತ್ತು ಕರ್ನಾಟಕ ವಕೀಲರ ಪರಿಷತ್ ನ ಮಾಜಿ ಅಧ್ಯಕ್ಷ ಪಿ.ಪಿ.ಹೆಗ್ಡೆ ಉದ್ಘಾಟಿಸಿದರು.
ಮುಖ್ಯ ಚುನಾವಣಾಧಿಕಾರಿ, ನ್ಯಾಯವಾದಿ ಮೊಗರ್ನಾಡ್ ವೆಂಕಟೇಶ್ ಭಟ್ ಅಧಿಕಾರ ಹಸ್ತಾಂತರ ಮತ್ತು ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು.
ಈ ವೇಳೆ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೇಶವ ಕದ್ರಿಯವರನ್ನು ಸನ್ಮಾನಿಸಲಾಯಿತು ಹಾಗೂ ಕಳೆದ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಕೀಲರ ಮಕ್ಕಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಭಾನುಶಂಕರ ಬನ್ನಿಂತಾಯ ಕಾರ್ಯಕ್ಷೇತ್ರದಲ್ಲಿ ಮಾನಸಿಕ ಒತ್ತಡ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಇಮ್ತಿಯಾಝ್ ಅಹಮ್ಮದ್, ಹೆಚ್ಚುವರಿ ಸಿವಿಲ್ ನ್ಯಾಯಾಧ ಶೆ ಪ್ರತಿಭಾ ಡಿ.ಎಸ್, ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ವೆಂಕಟ್ರಮಣ ಶೆಣೈ, ಉಪಾಧ್ಯಕ್ಷ ಚಂದ್ರಶೇಖರ ರಾವ್ ಪುಂಚಮೆ, ಪ್ರಧಾನ ಕಾರ್ಯದರ್ಶಿ ಆಶಾ ಪ್ರಸಾದ್ ರೈ, ಜತೆ ಕಾರ್ಯದರ್ಶಿ ವಿನೋದ ಎ.ಎಸ್, ಕೋಶಾಧಿಕಾರಿ ಚಂದ್ರಶೇಖರ ಬೈರಿಕಟ್ಟೆ ಉಪಸ್ಥಿತರಿದ್ದರು.
ನ್ಯಾಯವಾದಿ ರವೀಂದ್ರ ಕುಕ್ಕಾಜೆ ಸ್ವಾಗತಿಸಿದರು. ನ್ಯಾಯವಾದಿ ವಿರೇಂದ್ರ ಜೈನ್ ಸಿದ್ಧಕಟ್ಟೆ ವಂದಿಸಿ, ನ್ಯಾಯವಾದಿ ಕೆ.ನರೇಂದ್ರನಾಥ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

