ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಸಮಾರಂಭ ರಾಜಭವನದಲ್ಲಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಒಟ್ಟು 23 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಮೊದಲಿಗೆ ಜೆಡಿಎಸ್ನ ಎಚ್.ಡಿ. ರೇವಣ್ಣ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಕಾಂಗ್ರೆಸಿನ ಆರ್.ವಿ. ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದರು.
ಕನಕಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಂಪುಟ ದರ್ಜೆ ಸಚಿವರಾಗಿ ತಾಯಿ ಚಾಮುಂಡೇಶ್ವರಿ ಹೆಸರಿನಲ್ಲಿ ಪ್ರತಿಜ್ಞೆ ಮಾಡಿದರು.

