ಬಂಟ್ವಾಳ: ತಾಲೂಕಿನ ಇರಾ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಮಿತಿ ವತಿಯಿಂದ 50ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗರಿಷ್ಠ ಮೊತ್ತದ ಅನುದಾನ ಒದಗಿಸುವಂತೆ ಒತ್ತಾಯಿಸಿ ಮಂಗಳೂರಿನ ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಹರೀಶ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಕೀಲ ಚಂದ್ರಶೇಖರ ಪೂಜಾರಿ, ಮಂಗಳೂರು ಎಪಿಎಂಸಿ ಸದಸ್ಯ ಭರತೇಶ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

