13-june-5

ಸ‌ಸಿಹಿತ್ಲು: ಮೂಲ್ಕಿ-ಮೂಡಬಿದಿರೆ ಕ್ಷೇತ್ರವನ್ನು ಕಾಂಗ್ರೆಸ್‌ ಮುಕ್ತವನ್ನಾಗಿ ಮಾಡುವ ಸಂಕಲ್ಪ ಪ್ರತೀ ಕಾರ್ಯಕರ್ತರಲ್ಲಿ ಮೂಡಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಕರೆ ನಿಡಿದ್ದಾರೆ.

ಬಿಜೆಪಿ ವತಿಯಿಂದ ಇಲ್ಲಿನ ದಿವ್ಯಾಮೃತ ಸಭಾಭವನದಲ್ಲಿ ನಡೆದ ಸಾರ್ವಜನಿಕ ಸನ್ಮಾನವನ್ನು ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.

ಶಾಸಕನಾಗಿ ತನ್ನ ಮೊದಲ ಪ್ರಾಶಸ್ತ್ಯವನ್ನು ಕಾರ್ಯಕರ್ತರಿಗೆ ಮೀಸಲಿರಿಸಿದ್ದೇನೆ. ಬಿಜೆಪಿಯಲ್ಲಿ ಮಾತ್ರ ತಳಮಟ್ಟದ ಸಾಮಾನ್ಯ ಕಾರ್ಯಕರ್ತನಿಗೂ ಮನ್ನಣೆ ಸಿಗುತ್ತದೆ ಎಂದು ಹೇಳಿದರು.

ಶ್ರೀ ಸಸಿಹಿತ್ಲು ಭಗವತೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ್‌ ಯಾನೆ ಅಪ್ಪು ಪೂಜಾರಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಅಧ್ಯಕ್ಷ ಈಶ್ವರ ಕಟೀಲು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್‌ ಕುಮಾರ್‌ ಬೊಳ್ಳೂರು, ತಾ.ಪಂ. ಸದಸ್ಯ ಜೀವನ್‌ ಪ್ರಕಾಶ್‌ ಕಾಮೆರೊಟ್ಟು, ಕಿನ್ನಿಗೊಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್‌ ಆರ್‌. ಶೆಟ್ಟಿ, ಹಳೆಯಂಗಡಿ ಗ್ರಾಮ ಸಮಿತಿಯ ಅಧ್ಯಕ್ಷ ನರೇಂದ್ರ ಪ್ರಭು, ಬೂತ್‌ ಸಮಿತಿಯ ಅಧ್ಯಕ್ಷರಾದ ಸೂರ್ಯ ಕಾಂಚನ್‌, ಆನಂದ ಸುವರ್ಣ, ಧನರಾಜ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

ಕ್ಷೇತ್ರದ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕ ಅನಿಲ್‌ ಕುಂದರ್‌ ಸ್ವಾಗತಿಸಿದರು. ಜಿಲ್ಲಾ ಸಂಚಾಲಕ ಶೋಭೇಂದ್ರ ಸಸಿಹಿತ್ಲು ಪ್ರಸ್ತಾವನೆಗೈದರು.

 

By Suddi9

Leave a Reply

Your email address will not be published. Required fields are marked *