ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 6ದಿನಗಳ ಪ್ರವಾಸ ನಿಮಿತ್ತ ಜಪಾನ್‌ ದೇಶಕ್ಕೆ ಆ.30ರಂದು ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ತೆರಳಿದ್ದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ 6ಗಂಟೆಗೆ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ನಿಲ್ದಾಣದಲ್ಲಿ ಮೋದಿ ಅವರು ಜಪಾನ್‌ಗೆ ತೆರಳಿದರು. ನರೇಂದ್ರ ಮೋದಿ ಅವರೊಂದಿಗೆ ಪ್ರಧಾನಮಂತ್ರಿ ಕಾರ್ಯಾಲಯದ ಕೆಲ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ತೆರಳಿದ್ದಾರೆ ಎಂದು ತಿಳಿದುಬಂದಿದೆ.
narendre-modi-02
ಮತ್ತೊಂದು ಪ್ರಮುಖ ವಿಚಾರವೆಂದರೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದ ಪ್ರಮುಖ ವಾಣಿಜ್ಯೋಧ್ಯಮಿಗಳಾದ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖೇಶ್ ಅಂಬಾನಿ ಮತ್ತು ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿ ಅವರು ಜಪಾನ್‌ಗೆ ತೆರಳಿದ್ದಾರೆ. ಇನ್ನು ಕೆಲವೇ ಗಂಟೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ವಿಮಾನ ಜಪಾನ್‌ನ ಕ್ಯಾಟೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು, ಜಪಾನ್ ಪ್ರಧಾನಿ ಶಿಂನ್ಜೋ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲ್ಲಿದ್ದಾರೆ. ಬಳಿಕ ಜಪಾನ್ ಪ್ರಧಾನಿ ಶಿಂನ್ಜೋ ಅವರ ನಿವಾಸಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಖಾಸಗಿಯಾಗಿ ಶಿಂನ್ಜೋ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಉಭಯ ದೇಶದ ಪ್ರಧಾನಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆ.

By suddi9

Leave a Reply

Your email address will not be published. Required fields are marked *