ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯದ ತ್ರೈಮಾಸಿಕ ಸಭೆಯು ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ವಿಟ್ಲ ಎ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ| ನವೀನ್ ಕುಮಾರ್ ಚರ್ಮ ರೋಗದ ಬಗ್ಗೆ ಮಾಹಿತಿ ನೀಡಿದರು.

ವಿಟ್ಲ ವಲಯ ಮೇಲ್ವಿಚಾರಕಿ ಪ್ರೇಮ, ವಿಟ್ಲ ಎ ಒಕ್ಕೂಟದ ಸೇವಾ ಪ್ರತಿನಿಧಿ ಕೌಶಿತಾ, ಜನಾರ್ಧನ ಪದ್ಮಶಾಲಿ, ಜಯಂತಿ ಉಪಸ್ಥಿತರಿದ್ದರು. ರಾಜೇಶ್ ಸ್ವಾಗತಿಸಿದರು. ಕೇಶವ ವಿಟ್ಲ ವಂದಿಸಿದರು.
