ಬಂಟ್ವಾಳ:ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿ ಎಂಬಲ್ಲಿ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಂಗುದಾಣದಲ್ಲಿ ಅಳವಡಿಸಿದ್ದ ಮಾಡಿನ ತಗಡು ಶೀಟು ಬುಧವಾರ ಸಂಜೆ ಸುರಿದ ಭಾರೀ ಗಾಳಿಗೆ ಮಳೆಗೆ ಹಾರಿ ಬಿದ್ದ ಪರಿಣಾಮ ಸ್ಥಳದಲ್ಲಿದ್ದ ದಿನೇಶ ಕುಲಾಲ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
