ಬಂಟ್ವಾಳ: ಧರ್ಮಸ್ಥಳ ನಿತ್ಯಾನಂದ ನಗರ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸೆಪ್ಟೆಂಬರ್ 3 ರಂದು ನಡೆಯಲಿರುವ ರಾಷ್ಟ್ರೀಯ ಧರ್ಮ ಸಂಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ಜುಲೈ 1ರಂದು  ಭಾನುವಾರ ಬೆಳಿಗ್ಗೆ ಗಂಟೆ 10 ಕ್ಕೆ ಸರಿಯಾಗಿ ಮೆಲ್ಕಾರ್ ಬಿರ್ವ ಸೆಂಟರ್ ನ ಮಿನಿ ಸಭಾಭವನದಲ್ಲಿ ನಡೆಯಲಿದೆ.

ಶ್ರೀ ರಾಮಕ್ಷೇತ್ರದ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು, ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿಯವರು, ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀಕ್ಷೇತ್ರ ಕಣಿಯೂರಿನ ಮಹಾಬಲ ಸ್ವಾಮೀಜಿ, ಬಾಳೆಕೋಡಿ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ ಸೇರಿದಂತೆ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರದ ಮುಖಂಡರು ಭಾಗವಹಿಸಲಿದ್ದಾರೆ.

ಪೂರ್ವಭಾವಿ ಸಭೆಗೆ ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಎಲ್ಲ ಪದಾಧಿಕಾರಿಗಳು, ಸದಸ್ಯರು , ಮಹಿಳಾ ಘಟಕದ ಸದಸ್ಯರು, ಪುರಸಭಾ ಸಮಿತಿಯ ಪದಾದಿಕಾರಿಗಳು, ಭಗವದ್ಭಕ್ತ ಹಿಂದೂ ಬಾಂಧವರು ಭಾಗವಹಿಸುವಂತೆ ಸಮಿತಿಯ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *