ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಗ್ರಾಮದ ಮರ್ಧೋಳಿ ಗುಡ್ಡ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ನಗರ ಠಾಣಾಧಿಕಾರಿ ಚಂದ್ರಶೇಖರ್ ನೇತತ್ವದ ಪೊಲೀಸರು ದಾಳಿ ನಡೆಸಿ ಮೂರು ಕೋಳಿ ಸಹಿತ ಒಬ್ಬನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಸಜಿಪನಡು ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಈತನಿಂದ ರೂ 3,980 ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದೆ. ಪ್ರತೀ ಭಾನುವಾರ ಇಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ದಾಳಿ ನಡೆದಿದ್ದು, ಅಷ್ಟರಲ್ಲಿ ಕೋಳಿ ಅಂಕದಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಪೊಲೀಸ್ ಜೀಪು ಕಂಡು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
