ಮೂಡಬಿದಿರೆ : ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡದಲ್ಲಿ ಹೆಣ್ಣಿನ ಋತುಸ್ರಾವದ ಬಗ್ಗೆ ಹಲವು ಗೂಂದಲಗಳಿವೆ. ಈ ಅಭಿಯಾನದ ಮೂಲಕ ಮಹಿಳೆಯರ ನೈಜ ಸಬಲೀಕರಣ, ಋತು ಸ್ರಾವದ ಬಗ್ಗೆ ವೈಜ್ಞಾನಿಕ ಅರಿವು ಮೂಡಿಸುವ ಆಗತ್ಯ ಇದೆ. ಈ ನಿಟ್ಟಿನಲ್ಲಿ `ಸ್ವಚ್ಛ ಗೆಳತಿ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಅಭಿಯಾನದ ಜಿಲ್ಲಾ ಸಂಯೋಜಕಿ ಮಂಜುಳಾ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಮಂಗಳೂರು ಸ್ವಚ್ಛ ಭಾರತ ಮಿಷನ್ 2018-19, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿಶ್ವವಿದ್ಯಾನಿಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆಳ್ವಾಸ್ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಕಾಲೇಜುಗಳ ವಿದ್ಯಾರ್ಥಿನಿಯರಿಗಾಗಿ, `ಸ್ವಚ್ಛ ಗೆಳತಿ’ ಎಂಬ ಋತುಸ್ರಾವ ಜಾಗೃತಿ ಅಭಿಯಾನ ಹಾಗೂ ತ್ಯಾಜ್ಯ ನಿರ್ವಹಣೆ ಅಭಿಯಾನವನ್ನು ಕುವೆಂಪು ಸಭಾ ಭವನದಲ್ಲಿ ಸೋಮವಾರ ಉದ್ಘಾಟಿಸಿ ಮಾತನಾಡಿದರು.
ನಮ್ಮ ಜಿಲ್ಲೆ ಬಯಲು ಮುಕ್ತ ಶೌಚಾಲಯ ಯೋಜನೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಆದರಂತೆ ಮಂಗಳೂರು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸ್ವಚ್ಛ ಗೆಳೆತಿ ಎಂಬ ಋತುಸ್ರಾವ ಜಾಗೃತಿ ಅಭಿಯಾನ ಮತ್ತು ತ್ಯಾಜ್ಯ ನಿರ್ವಹಣೆ ಎಂಬ ಅಭಿಯಾನವನ್ನು ಕೈಗೊಳ್ಳಲಾಗಿದೆ. ಋತುಸ್ರಾವದ ಸಮಯದಲ್ಲಿ ಅನುಸರಿಸಬೇಕಾದ ಶುಚಿತ್ವದ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು, ಹೆಣ್ಣು ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಆತ್ಮ ಗೌರವ ಹೆಚ್ಚಿಸುವುದು, ಸಾಮಾಜಿಕ ಕಟ್ಟುಪಾಡುಗಳ ಬಗ್ಗೆ ಜಾಗೃತಿ ಮೂಡಿಸುವುದು,ಸಾರ್ವಜನಿಕ ಮನಸ್ಥಿತಿಯಲ್ಲಿ ಬದಲಾವಣೆ ತರುವುದು ಹಾಗೂ ಋತು ಸ್ರಾವ ತ್ಯಾಜ್ಯ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.
ಸಂಜನ ಕ್ಲಿನಿಕ್ನ ಡಾ.ರಶ್ಮಿ ಎಂ.ಎನ್, ಕೆ.ಎಸ್ ಹೆಗ್ಡೆ ಇನ್ಟಿಟ್ಯೂಟ್ ಸೈಕ್ಯಾಟ್ರಿ ವಿಭಾಗದ ಅಸಿಸ್ಟೆಂಟ್ ಫ್ರೊಫೆಸರ್ ಪ್ರಶಾಂತ್ ಹಾಗೂ ಮೂಡಬಿದಿರೆ ಆಳ್ವಾಸ್ ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ಡಾ.ಮಧುಮಾಲ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡರು. ಮಂಗಳೂರು ತಾಲೂಕು ಪಂಚಾಯತಿ ಕಾರ್ಯನಿರ್ವಣಾಧಿಕಾರಿ ಜಿ ಸದಾನಂದ, ತೆಂಕಮಿಜಾರು ಪಿ.ಡಿ.ಓ ಸಾಯಿಶ್ ಚೌಟ, ಆಳ್ವಾಸ್ ಕಾಲೇಜಿನ ಫೋರಂ ಸಂಚಾಲಕ ಡಾ ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು.
ಆಳ್ವಾಸ್ ಕಾಲೇಜಿನ ಎನ್.ಎಸ್.ಎಸ್ ಸಂಚಾಲಕಿ ನವ್ಯಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

