ನವದೆಹಲಿ: ಜಿಎಸ್‍ಟಿ ತೆರಿಗೆಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಮೇಲೆ ಕೇಂದ್ರ ಸರ್ಕಾರ ತೆರಿಗೆ ಹಾಕಿತ್ತು. ಈ ತೆರಿಗೆಯನ್ನು ದೇಶಾದ್ಯಂತ ಜನರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ ಈಗ ಜಿಎಸ್‍ಟಿಯ 28ನೇ ಸಭೆಯಲ್ಲಿ ಕೇಂದ್ರ ಸರ್ಕಾರ ತೆರಿಗೆಯನ್ನು ಹಿಂಪಡೆದಿದೆ.

ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್ಕಿನ್ ಜಿಎಸ್‍ಟಿ ವ್ಯಾಪ್ತಿಯಿಂದ ಹೊರಗಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.
ಹಿಂದಿನ ಸಭೆಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್‍ಗೆ ಶೇ. 12ರಷ್ಟು ಜಿಎಸ್‍ಟಿ ವಿಧಿಸಲಾಗಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಮಹಿಳೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
