ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಪಿಪಕ್ ವಾಹನದಲ್ಲಿ ಮಂಗಳೂರು ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾದ ಎರಡು ಕೋಣ ಸಹಿತ ಇಬ್ಬರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತರನ್ನು ಮೂಡುಬಿದ್ರೆ ನಿವಾಸಿ ಸೀರಜ್ ಮತ್ತು ಬಾಳೆಪುಣಿ ನಿವಾಸಿ ಮಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಇವರು ಮೂಡುಬಿದ್ರೆ ಕಡೆಯಿಂದ ಬಂಟ್ವಾಳ ಮಾರ್ಗವಾಗಿ ಬಿ.ಸಿ.ರೋಡು ಕಡೆಗೆ ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ನಗರ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ಪೊಲೀಸರು ಕಾಯರ್ಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿಕಪ್ ವಾಹನ ಸಹಿತ ಕೋಣಗಳ ಒಟ್ಟು ಮೌಲ್ಯ ರೂ 2.20ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
