ವಿಟ್ಲ: ಬಂಟ್ವಾಳ ತಾಲೂಕಿನ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ 12 ಗ್ರಾಮಗಳ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ವಿಟ್ಲದ ಪ್ರವಾಸಿ ಮಂದಿರದಲ್ಲಿ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಮಾತನಾಡಿ, `ಸರಕಾರಿ ಅಧಿಕಾರಿಗಳು ಕಾನೂನಿನ ಜೊತೆಯಲ್ಲಿ ಸ್ವಲ್ಪಾಂಶ ಮಾನವೀಯತಯನ್ನು ತೋರಿದಾಗ ಫಲಾನುಭವಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೋಡಂದೂರು, ವಿಟ್ಲ ಉಪತಹಶೀಲ್ದಾರ್ ರವಿಶಂಕರ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮದಾಸ ಶೆಣೈ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ, ಉಪಾಧ್ಯಕ್ಷ ಜಯಂತ, ಅಳಿಕೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಈಶ್ವರ ಭಟ್ ಕಾನ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಕುಮಾರ್ ಆಲಂಗಾರು, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ, ಮಾಣಿಲ ಗ್ರಾಮ ಪಂಚಾಯತ್ ಸದಸ್ಯ ಮುರುವ ಮಹಾಬಲ ಭಟ್ ಮೊದಲಾದವರು ಉಪಸ್ಥಿತರಿದ್ದರು.
12 ಗ್ರಾಮಗಳಿಗೆ ಸಂಬಂಧಪಟ್ಟ ಗ್ರಾಮ ಕರಣಿಕರು ಭಾಗವಹಿಸಿದ್ದರು. ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್ ಸ್ವಾಗತಿಸಿ ವಂದಿಸಿದರು.
