ಅಡ್ಡೂರು: ಅಡ್ಡೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ವಿತರಣಾ ಕಾರ್ಯಕ್ರಮ ಇಲ್ಲಿನ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

shoe distribution (2)

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ.ಸದಸ್ಯ ಯು.ಪಿ.ಇಬ್ರಾಹೀಂ, ಸರಕಾರದಿಂದ ಸಿಗುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದ್ಬಬಳಕೆ ಮಾಡಿಕೊಂಡು ತಮ್ಮ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

shoe distribution (5)
ಕಾರ್ಯಕ್ರಮದಲ್ಲಿ ತಾ.ಪಂ.ಸದಸ್ಯ ಸಚಿನ್ ಅಡಪ, ಗುರುಪುರ ಗ್ರಾ.ಪಂ. ಸದಸ್ಯರಾದ ಟಿ.ಅಹ್ಮದ್ ಬಾವಾ, ಮೊಹಮ್ಮದ್, ಜಲೀಲ್, ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಇ.ಕೆ.ಸಿದ್ದೀಕ್, ಸೆಂಟ್ರಲ್ ಕಮಿಟಿ ಅಧ್ಯಕ್ಷ ಅನ್ವರ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಫಾರೂಕ್, ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಎ.ಕೆ.ಜಬ್ಬಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಜಾನೆಟ್ ಸ್ವಾಗತಿಸಿದರು. ಶಿಕ್ಷಕಿ ಪ್ರಭಾವತಿ ಕಾರ್ಯಕ್ರಮವನ್ನು ನಿರೂಪಿಸಿದರು.

By suddi9

Leave a Reply

Your email address will not be published. Required fields are marked *