ಬಂಟ್ವಾಳ: ಪಡಿಬಾಗಿಲಿನ ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿಯಲ್ಲಿ ಉದಯಗಿರಿ, ಕುದ್ದುಪದವು ಮತ್ತು ಅಜ್ಜಿನಡ್ಕ ಕ್ಲಸ್ಟರ್ ಮಟ್ಟದ `ಪ್ರತಿಭಾ ಕಾರಂಜಿ 2018-19′ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೋಡಂದೂರು ಉದ್ಘಾಟಿಸಿದರು.

ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯೆ ಕವಿತಾ ಎಸ್ ನಾಯ್ಕ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಾರಂತ, ಸದಸ್ಯರುಗಳಾದ ಲಿಂಗಪ್ಪ ಗೌಡ ಮತ್ತು ಜಿನಚಂದ್ರ ಜೈನ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯ ರವಿ ನಾಯ್ಕ ಉಪಸ್ಥಿತರಿದ್ದರು.
ಶಾಲಾಭೀವೃದ್ಧಿ ಸಮಿತಿ ಸದಸ್ಯ ಪ್ರಭಾಕರ ಶೆಟ್ಟಿ ದಂಬೆಕಾನ ಸ್ವಾಗತಿಸಿದರು. ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ಬಿ ಆರ್ ಪಿ ಪ್ರದೀಪ್ ಕುಮಾರ್ ಪ್ರಸ್ತಾವಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ವಂದಿಸಿದರು.
