ಬಂಟ್ವಾಳ: ಸರ್ಕಾರದಿಂದ ಕೊಡುವ ಸೌಲಭ್ಯಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಸರ್ಕಾರಿ ಶಾಲೆಯ ಮಕ್ಕಳು ಕೂಡ ಉತ್ತಮ ಶಿಕ್ಷಣವನ್ನು ಪಡೆಯಲು ಸರ್ಕಾರ ಇಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗ ಆಗಬೇಕು ಮತ್ತು ಇದರ ಪ್ರಯೋಜನ ತಿಳಿಯಬೇಕು ಎಂದು ಶಾಲಾಭಿವೃದ್ಧಿ ಮ್ತತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಉಮರ್ ಫಾರೂಕ್ರವರು ತಿಳಿಸಿದರು.

ಸರ್ಕಾರಿ ಪ್ರೌಢಶಾಲೆ ಸುಜೀರು, ಪುದು. ಇಲ್ಲಿನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಉಚಿತ ಶೂ-ಚಪ್ಪಲ್ ವಿತರಣಾ ಕಾರ್ಯಕ್ರಮವು ಜು27ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮ್ಲಾನ್, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಝಬೇರ್, ಇಂದಿರಾ, ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಮಂಗಳ ವೈ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕ ಜಯಪ್ರಕಾಶ್ ಸ್ವಾಗತಿಸಿದರು. ಶಿಕ್ಷಕ ಮಹಮ್ಮದ್ ಬಿ ನಿರೂಪಿಸಿ, ವಂದಿಸಿದರು.


