ಮೂಡುಬಿದಿರೆ: ವಿದ್ಯಾರ್ಥಿ ಜೀವನದ ದೆಸೆಯಲ್ಲಿಯೇ ವ್ಯಕ್ತಿತ್ವ ನಿರ್ಮಾಣವನ್ನು ಮಾಡುವಂತಹ ಮಹತ್ತರ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳು ಅರಿತುಕೊಂಡು, ವಿಕಸನ ಹೊಂದಬೇಕು. ಪಠ್ಯಕೇಂದ್ರಿತ ವಿಚಾರಗಳೇ ವಿಕಾಸವಲ್ಲ. ಬದುಕನ್ನು ಉದಾತ್ತ ಚಿಂತನೆಯೊಂದಿಗೆ ಭವಿಷ್ಯವನ್ನು ರೂಪಿಸುವ ನೆಲೆಗಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಉಜಿರೆ ಎಸ್‍ಡಿಎಂ ಕಾಲೇಜಿನ ಕುಲಸಚಿವ ಡಾ. ಬಿ.ಪಿ ಸಂಪತ್ ಕುಮಾರ್ ತಿಳಿಸಿದರು.

dhavala clg
ಮೂಡಬಿದಿರೆಯ ಶ್ರೀ ಧವಲಾ ಮಹಾವಿದ್ಯಾಲಯದಲ್ಲಿ ನಡೆದ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.
2017-18 ನೇ ಸಾಲಿನ `ಪ್ರತಿಬಿಂಬ’ ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಸಂಚಾಲಕ ಕೆ. ಹೇಮರಾಜ್ ಬಿಡುಗಡೆಗೊಳಿಸಿದರು.
ಕಾಲೇಜಿನ ನೂತನ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಡಾ. ಬಿ.ಪಿ. ಸಂಪತ್ ಕುಮಾರ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ರವೀಶ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಸಂಯೋಜಕ ಪ್ರವೀಣ್ ಕುಲಕರ್ಣಿ, ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಸ್ವಾಗತಿಸಿದರು. ಜೀವನ್ ಪಿಂಟೋ ಅತಿಥಿಗಳನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಜೆರೀನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ದೀಕ್ಷಿತ್ ವಂದಿಸಿದರು.

By suddi9

Leave a Reply

Your email address will not be published. Required fields are marked *