ಮುಂಬಯಿ: ದುಬಾಯಿಯಅಲ್ ನಾಸರ್ ಲೀಸರ್ ಲ್ಯಾಂಡ್‍ಐಸ್‍ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ತುಳು ಸಮ್ಮೇಳನದ ಸಲಹಾ ಸಮಿತಿಯ ಸರ್ವ ಸದಸ್ಯರ ಸಭೆ ಶುಕ್ರವಾರ ದುಬಾಯಿ ಮಾರ್ಕೋಪೋಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಪ್ರಪ್ರಥಮ ಬಾರಿಗೆ “ವಿಶ್ವ ತುಳು ಸಮ್ಮೇಳನ ದುಬಾಯಿ” ನವೆಂಬರ್23ರಂದು ಶುಕ್ರವಾರ ಮತ್ತು 24ನೇ ಶನಿವಾರ ನಡೆಯಲಿದೆ. ಸಾಗರೋತ್ತರ ತುಳುವರ ಮುಖ್ಯ ಸಂಘಟಕ ಸರ್ವೋತ್ತಮ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸರ್ವೋತ್ತಮ ಶೆಟ್ಟಿ ಮಾತನಾಡಿ ವಿಶ್ವ ತುಳು ಸಮ್ಮೇಳನ ದುಬಾಯಿ-2018ರ ವಿವರಗಳನ್ನು ಸಂಕ್ಷಿಪ್ತವಾಗಿ ವಿವರಿಸಿ, ಸಮ್ಮೇಳನದ ಪೂರ್ವತಯಾರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸರ್ವ ಸದಸ್ಯರು ಪೂರ್ಣ ಸಹಕಾರ ನೀಡಿ ಅತ್ಯಂತ ಜವಬ್ಧಾರಿಯುತವಾಗಿ ಕಾರ್ಯ ನಿರ್ವಹಿಸಿ, ಸಮ್ಮೇಳನ ಯಶಸ್ವಿ ಗೊಳಿಸುವಂತೆ ಮನವಿ ಮಾಡಿಕೊಂಡರು.
ಯು.ಎ.ಇ ಎಕ್ಸೇಂಜ್ ಗ್ಲೋಬಲ್ ಅಪರೇಶನ್ಸ್ ಅಧ್ಯಕ್ಷ ಸುಧೀರ್‍ಕುಮಾರ ಶೆಟ್ಟಿ “ವಿಶ್ವ ತುಳು ಸಮ್ಮೇಳನ ದುಬಾಯಿ2018” ಅಧಿಕೃತ ಲಾಂಛನ ಲೋಕಾರ್ಪಣೆ ಮಾಡಿ ಸಮ್ಮೇಳನದ ಪೂರ್ವತಯಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಯಶಸ್ಸಿಗೆ ಶುಭವನ್ನು ಹಾರೈಸಿದರು.
ಈ ಲಾಂಛನವನ್ನು ತುಳುನಾಡಿನ ಮತ್ತು ಗಲ್ಫ್ ನಾಡಿನ ಸಂಸ್ಕೃತಿ ಆಚಾರ ವಿಚಾರಗಳನ್ನು ಒಟ್ಟು ಗೂಡಿಸಿ ಅದರ ಪರಿಕಲ್ಪನೆಯಲ್ಲಿ ವಿನ್ಯಾಸಗೊಳಿಸಿರುವ ಕ್ರಿಯಾತ್ಮಕ ಕಲಾ ನಿರ್ದೇಶಕರಾದ ಬಿ. ಕೆ ಗಣೇಶ್‍ರೈ ಲಾಂಚನದ ಬಗ್ಗೆ ಅತೀ ಸೂಕ್ಷ ್ಮವಾಗಿ ವಿವರಿಸಿದರು.
ಅರಬ್ ಸಂಯುಕ್ತ ಸಂಸ್ಥಾದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿರುವ “ವಿಶ್ವ ತುಳು ಸಮ್ಮೇಳನ ದುಬಾಯಿ – 2018” ಸಮ್ಮೇಳನದ ಸವಿ ನೆನಪಿಗಾಗಿ ಲೋಕಾರ್ಪಣೆಗೊಳ್ಳಲಿರುವ ಸ್ಮರಣ ಸಂಚಿಕೆಗೆ ಹೆಸರು ಸೂಚಿಸಿ ಪ್ರಕಟಣೆ ನೀಡಿ ಆಹ್ವಾನಿಸಲಾಯಿತು. ಇಲ್ಲಿಯ ವರೆಗೆ ಒಟ್ಟು 166 ಹೆಸರುಗಳನ್ನು 22 ಮಂದಿ ತುಳು ಅಭಿಮಾನಿಗಳಿಂದ ಹೆಸರುಗಳನ್ನು ಸಂಗ್ರಹಿಸಲಾಗಿತ್ತು.

“ವಿಶ್ವ ತುಳು ಐಸಿರಿ” ಎಂಬ ಹೆಸರನ್ನು ಹಿರಿಯ ಸಾಹಿತಿಗಳು ತುಳು ಜ್ಞಾನ ಭಂಡಾರ ಡಾ|ಬಿ.ಎ ವಿವೇಕ್ ರೈ ಮತ್ತು ಮುಂಬಯಿಯಲ್ಲಿ ನೆಲೆಸಿರುವ ಡಾ| ಸುನಿತಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಬಿ. ಕೆ ಗಣೇಶ್ ರೈ ಸೂಚಿಸಿದ್ದ ಹೆಸರನ್ನು ಆಯ್ಕೆ ಮಾಡಲಾಯಿತು. ಶೋಧನ್ ಪ್ರಸಾದ್ ಸಮ್ಮೇಳನದ ಸಂದರ್ಭದಲ್ಲಿ ವಿವಿಧ ಹಂತದ ಕಾರ್ಯಯೋಜನೆಯನ್ನು ಆಕರ್ಷಕ ವೈವಿಧ್ಯಮಯ ಚಿತ್ರದೊಂದಿಗೆ ಡಿಜಿಟಲ್‍ಡಿಸ್ ಪ್ಲೆಯೊಂದಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಸಲಹ ಸಮಿತಿ ಸದ್ಯರುಗಳಾದ ಬಿ.ಕೆ ಗಣೇಶ್‍ರೈ, ಶೋಧನ್ ಪ್ರಸಾದ್, ದೇವ್‍ಕುಮಾರ್ ಕಾಂಬ್ಲಿ, ಅಜ್ಮಲ್, ಸತೀಶ್ ಪೂಜಾರಿ, ಯೋಗೇಶ್ ಪ್ರಭು, ನೋವೆಲ್ ಡಿ’ಅಲ್ಮೇಡಾ, ಜ್ಯೋತಿಕಾ ಹರ್ಷ ಶೆಟ್ಟಿ, ಸ್ಮಿತಾ ಪ್ರಸನ್ನ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಲಹಾ ಸಮಿತಿಯ ಸದಸ್ಯ ಶೋಧನ್ ಪ್ರಸಾದ್ ಸ್ವಾಗತಿಸಿದರು.




