ಬಂಟ್ವಾಳ: ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಎಸ್.ಸಿ/ಎಸ್.ಟಿ. ಪ್ರಾಥಮಿಕ ಮಾದ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ(ರಿ) ವತಿಯಿಂದ ಮೂರು ಜಿಲ್ಲೆಯನ್ನು ಒಳಗೊಂಡಂತೆ ಉಡುಪಿ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಸಂಘದ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಶಿಕ್ಷಕರಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಆ.5ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಈ ಮೂರು ಜಿಲ್ಲೆಯ ಸಮುದಾಯ ಶಿಕ್ಷಕರು ಈ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಂಡು ಶೈಕ್ಷಣಿಕವಾಗಿ ಶಿಕ್ಷಕರ ಕುಂದುಕೊರತೆಗಳನ್ನು ಹಂಚಿಕೊಳ್ಳಲು ಅವಕಾಶವಿರುತ್ತದೆ. ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ವಿಷಯವನ್ನು ಚರ್ಚಿಸಿ ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳಬಹುದು ಎಂದು ಜಿಲ್ಲಾಧ್ಯಕ್ಷರಾದ ಶ್ರೀ ಆಂಜನೇಯಸ್ವಾಮಿ ಹೊಸಮನಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀ ಧನರಾಜು ಡಿ.ಆರ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
