ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ಮಂಗಳೂರು ವಲಯದ 16ನೇ ವಾರ್ಷಿಕ ಮಹಾಸಭೆಯು ಮಂಗಳೂರಿನ ಬೆಂದೂರ್‍ನ ಸೈಂಟ್ ಸೆಬಾಸ್ಟಿಯನ್ ಮಿನಿ ಹಾಲ್ ನಲ್ಲಿ ಆ.7ರಂದು ಮಂಗಳವಾರ ಸಂಜೆ 6 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬೆಂಗಳೂರು ವಲಯದ ಅಧ್ಯಕ್ಷರಾದ ಪದ್ಮನಾಭ ಸುವರ್ಣ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ವಿಲ್ಸನ್ ಗೊನ್ಸಾಲಿಸ್ ಮಹಾಸಭೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಗೌರವ ಉಪಸ್ಥಿತಿಯನ್ನು ಜಿಲ್ಲಾ ಸಂಚಾಲಕರಾದ ವಿಠಲ ಚೌಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿದ್ದೋದ್ದೇಶ ಸಹಕಾರ ಸಂಘ (ರಿ.) ನ ಉಪಾಧ್ಯಕ್ಷರಾದ ಕರುಣಾಕರ ಕಾನಂಗಿ ವಹಿಸಲಿದ್ದಾರೆ.
ಮಂಗಳೂರು ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‍ನ ಅಧ್ಯಕ್ಷರಾದ ಪದ್ಮನಾಭ ಸುವರ್ಣ, ಗೌರವ ಅಧ್ಯಕ್ಷರಾದ ಲೋಕೇಶ್ ಕುಮಾರ್, ಉಪಾಧ್ಯಕ್ಷರಾದ ನೋಬರ್ಟ್ ಕ್ರಾಸ್ತಾ, ಹರೀಶ್ ಅಡ್ಯಾರ್, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಹಾಗೂ ಕೋಶಾಧಿಕಾರಿ ಬಿ.ವಸಂತ್ ರಾವ್ ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
