ವಿಟ್ಲ: ರೋಟರಿ ಕ್ಲಬ್ ಇದರ ಪ್ರಾಯೋಜಕತ್ವದಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ ಮತ್ತು ಹದಿಹರೆಯದ ಮಕ್ಕಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವು ಆ.10ಶುಕ್ರವಾರದಂದು ನಡೆಯಿತು.

interact
ಪುತ್ತೂರಿನ ಪ್ರಗತಿ ಆಸ್ಪತ್ರೆಯ ಡಾ| ಸುಧಾ ಎಸ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ಸಭಾಧ್ಯಕ್ಷತೆ ವಹಿಸಿ ಇಂಟರ್ಯಾಕ್ಟ್ ಕ್ಲಬ್‍ನ ಮಹತ್ವ ಮತ್ತು ಆರೋಗ್ಯದ ಅಗತ್ಯದ ಬಗ್ಗೆ ಮಾತಾಡಿದರು.
ಬಳಿಕ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ ವಿನೋದ್ ರಾತೋಡ್, ಉಪಾಧ್ಯಕ್ಷರಾಗಿ ದಯಾನಂದ, ಕಾರ್ಯದರ್ಶಿಯಾಗಿ ಚೈತನ್ಯ ಮತ್ತು ಜತೆ ಕಾರ್ಯದರ್ಶಿಯಾಗಿ ಶ್ರದ್ಧಾ ಇವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ಭಾಸ್ಕರ ಶೆಟ್ಟಿ ಮತ್ತು ವಸಂತ ಶೆಟ್ಟಿ, ಸದಸ್ಯರುಗಳಾದ ಡಾ| ವಿ ಕೆ ಹೆಗ್ಡೆ ಹಾಗೂ ಬಾಲಕೃಷ್ಣ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಪ್ರಾಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಪ್ರಕಾಶ್ ನಾಯಕ್ ನಿರೂಪಿಸಿದರು. ಕಾರ್ಯದರ್ಶಿ ಸುಚೇತನ್ ಜೈನ್ ವಂದಿಸಿದರು.

By Suddi9

Leave a Reply

Your email address will not be published. Required fields are marked *