ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

IMG_4475
ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಕಂಬಳಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಅಭಿವೃದ್ಧಿ ದೃಷ್ಠಿಯಿಂದ ಎಲ್ಲ ಸದಸ್ಯರ ಸಹಾರ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಷ್ಟು ಸೇವಾ ಕಾರ್ಯಗಳಲ್ಲಿ ಸಂಘವು ತೊಡಗಿಕೊಳ್ಳಲಿದೆ ಎಂದು ಹೇಳಿದರು.
ಇತ್ತಿಚೆಗೆ ಸಂಘದ ವತಿಯಿಂದ ಫರಂಗಿಪೇಟೆಯಲ್ಲಿ ಉಚಿತ ತಪಾಸಣಾ ಶಿಬಿರವನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವಾ ಕಾರ್ಯವನ್ನು ಮಾಡಲಾಗುವುದು ಎಂದ ಅವರು, ತುಂಬೆಯಲ್ಲಿ ಸಂಘಕ್ಕೆ ಸ್ವತ ಕಟ್ಟಡವನ್ನು ನಿರ್ಮಿಸುವ ಚಿಂತನೆಯಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಬಂಟ್ವಾಳ ತಾಲೂಕಿನ ೪೦ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಟ್ಟು ೧ ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಸಂಘದ ಪದಾಧಿಕಾರಿಗಳಾದ ಹರ್ಷಿಣಿ, ಸೀತಾರಾಮ ಶೆಟ್ಟಿ, ಜ್ಞಾನೇಶ್ವರ ಪ್ರಭು, ಪಿ.ಸುಬ್ರಹ್ಮಣ್ಯ ರಾವ್, ರತ್ನಾ, ಶಶಿಕಲಾ, ರಾಮನಾಯ್ಕ, ಪದ್ಮನಾಭ ಕಿದೆಬೆಟ್ಟು, ಸುಂದರ ಭಂಡಾರಿ, ವೆಂಕಟೇಶ ನಾವುಡ, ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಧರ್ಮಪಾಲ ಭಂಡಾರಿ ನಿರೂಪಿಸಿದರು.ಅಧ್ಯಕ್ಷ ರವೀಂದ್ರ ಕಂಬಳಿ ಸ್ವಾಗತಿಸಿ, ನಿರ್ದೇಶಕ ನಾರಾಯಣ ಭಟ್ ವಂದಿಸಿದರು.

By suddi9

Leave a Reply

Your email address will not be published. Required fields are marked *