ಮೂಡುಬಿದರೆ: ಭಾರತದಲ್ಲಿ ರಾಷ್ಟ್ರೀಯತೆಯ ಕಲ್ಪನೆ: ಚಾರಿತ್ರಿಕ, ಸಾಂಸ್ಕೃತಿಕ, ಆಥರ್ಿಕ ಮತ್ತು ರಾಜಕೀಯ ಪ್ರವೃತ್ತಿ ಎಂಬ ವಿಷಯದ ಕುರಿತು ಯುಜಿಸಿ ಪ್ರಾಯೋಜಕತ್ವದಲ್ಲಿ, ಶ್ರೀ ಮಹಾವೀರ ಕಾಲೇಜಿನ ಆಂತರಿಕ ಗುಣಮಟ್ಟ ನಿರ್ವಹಣಾಕೋಶ ಮತ್ತು ಮಾನವಿಕ ವಿಭಾಗ, ಮಂಗಳೂರು ವಿವಿ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ, ಇತಿಹಾಸ ಅಧ್ಯಾಪಕರ ಸಂಘ ಹಾಗೂ ಅರ್ಥಶಾಸ್ತ್ರ ಅಧ್ಯಾಪಕರ ಸಂಘದ ಸಹಯೋಗದಲ್ಲಿ, ಸಪ್ಟೆಂಬರ್ 5 ಮತ್ತು 6ರಂದು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವು ಶ್ರೀ ಮಹಾವೀರ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಕಿರಣದ ಮುಖ್ಯ ಸಂಯೋಜಕ ಪ್ರೋ. ಚಂದ್ರಶೇಖರ ದೀಕ್ಷಿತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Mahaveera College Pressmeet abt National Seminar
ಸಪ್ಟೆಂಬರ್ 5ರಂದು ಬೆಳಿಗ್ಗೆ 9.30ಕ್ಕೆ ಕೇರಳ ರಾಜ್ಯದ ಕಾಸರಗೋಡು ಸೆಂಟ್ರಲ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜಿ.ಗೋಪಕುಮಾರ್ ಸಂಕಿರಣ ಉದ್ಘಾಟಿಸಿ, ದಿಕ್ಸೂಚಿ ಭಾಷಣಗೈಯಲಿದ್ದಾರೆ. ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಮುಖ್ಯ ಅತಿಥಿಗಳಾಗಿ
ಭಾಗವಹಿಸಲಿದ್ದು, ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಎರಡು ದಿನಗಳ ಕಾಲ ನಡೆಯಲಿರುವ ಈ ಸಂಕಿರಣದಲ್ಲಿ, ವಿವಿಧ ತಾಂತ್ರಿಕ ಅಧಿವೇಶನಗಳು ಹಾಗೂ ಪ್ರತಿನಿಧಿಗಳಿಂದ ಪ್ರಬಂಧ ಮಂಡನೆ ನಡೆಯಲಿದ್ದು, ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಿ.ಎಲ್.ಧರ್ಮ, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಶ್ರೀಪತಿ ಕಲ್ಲೂರಾಯ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಡಾ.ಎ.ಶ್ರೀಧರ್, ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ವಿಭಾಗದ ಪ್ರಾಧ್ಯಾಪಕ ಕೆ. ಅಶೋಕ್, ಬೆಂಗಳೂರು ವಿವಿ ಇತಿಹಾಸ ವಿಭಾಗದ ಡಾ. ಅಶ್ವತ್ಥನಾರಾಯಣ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಸಪ್ಟೆಂಬರ್ 6ರಂದು ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ, ಮಂಗಳೂರು ವಿವಿ ರಿಜಿಸ್ಟ್ರಾರ್ ಡಾ.ಸುಬ್ರಹ್ಮಣ್ಯ ಯಡಪಡಿತ್ತಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ವಿಚಾರ ಸಂಕಿರಣದಲ್ಲಿ ಮಂಡಿಸಲಾಗುವ ಪ್ರಬಂಧಗಳನ್ನು ಅವುಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಐಎಸ್ಬಿಎನ್ ಅಡಿಯಲ್ಲಿ ಪ್ರಕಟಿಸುವ ಪ್ರಕ್ರಿಯೆಗಳಿಗೂ ಪ್ರಯತ್ನಿಸಲಾಗುವುದು. ವಿಚಾರ ಸಂಕಿರಣದಲ್ಲಿ ದೇಶದ ವಿವಿಧ ಕಾಲೇಜುಗಳ 150ಕ್ಕೂ ಅಧಿಕ ಸಂಶೋಧಕರು, ಉಪನ್ಯಾಸಕರು ಹಾಗೂ
ಸುದ್ದಿಗೋಷ್ಠಿಯಲ್ಲಿ ಸಂಚಾಲಕ ಪ್ರೊ.ಪ್ರವೀಣ್ ಹಾಗೂ ಉಪಸಂಚಾಲಕ ಪ್ರೊ. ಹೆಚ್.ಎಸ್. ಜಯಶ್ರೀ ಮತ್ತು ಪ್ರೊ. ಜಯಲಕ್ಷ್ಮಿ,ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರೊ. ಹರೀಶ್ ಉಪಸ್ಥಿತರಿದ್ದರು.

 

 

By suddi9

Leave a Reply

Your email address will not be published. Required fields are marked *