ಬಂಟ್ವಾಳ: ನರಿಕೊಂಬು ಗ್ರಾಮದ ಪುತ್ರೋಟಿಬೈಲು ನಿವಾಸಿ ದಿವಂಗತ ನಾರಾಯಣ ಶೆಟ್ಟರ ಪುತ್ರ ಸತೀಶ್ ಶೆಟ್ಟಿ (65) ಇವರು ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಇವರು ಪಾಣೆಮಂಗಳೂರಿನ ಸತ್ಯದೇವತಾ ಚಾರಿಟೇಬಲ್ ಟ್ರಸ್ಟ್ ಮತ್ತು ಸರಸ್ವತಿ ಭಜನಾ ಮಂದಿರದ ಸಕ್ರಿಯ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
