ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾಕಾರಂಜಿ ನಡೆಯಿತು.

ಇದರಲ್ಲಿ ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲೆ ವಿಭಾಗದ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
