ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾ ಭಸ್ಮಕ್ಕೆ ಶನಿವಾರ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಮೇಯರ್ ಗಣೇಶ್ ಹೊಸಬೆಟ್ಡು, ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ. ದೇವದಾಸ ಶೆಟ್ಟಿ ಮತ್ತಿತರರು ಇದ್ದರು.
