ಕಿನ್ನಿಗೋಳಿ: ಟಿಪ್ಪರ್ ಮತ್ತು ಆ್ಯಕ್ಟಿವಾ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಿನ್ನಿಗೋಳಿ ಸಮೀಪದ ಪೊಂಪೈ ಕಾಲೇಜು ಸಮೀಪ ನಡೆದಿದೆ. ಕಾರ್ನಾಡು ನಿವಾಸಿ ವರ್ಶಿತ್ (21) ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ವಿದ್ಯಾರ್ಥಿ. ಸಹಸವಾರ ಡೆರಿಕ್ ವಾಸ್ (20) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Image 2018-09-07 at 3.47.57 PM
ಶುಕ್ರವಾರ ಮಧ್ಯಾಹ್ನ ವರ್ಶಿತ್ ಮತ್ತು ಡೆರಿಕ್ ವಾಸ್ ಆ್ಯಕ್ಟಿವಾ ಸ್ಕೂಟಿಯಲ್ಲಿ ಊಟಕ್ಕೆಂದು ಹೊರಟ ಸಂದರ್ಭದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟಿಪ್ಪರ್ ವರ್ಶಿತ್ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

By suddi9

Leave a Reply

Your email address will not be published. Required fields are marked *