ಬಂಟ್ವಾಳ: ಕೇಪು ಕಲ್ಲಂಗಳ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢಶಾಲಾ ಬಾಲಕ ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೋಡಂದೂರು ಉದ್ಘಾಟಿಸಿದರು.

ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಕವಿತಾ, ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಕರೀಂ, ಬಾಲಚಂದ್ರ, ಶಿಕ್ಷಣ ಇಲಾಖೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಪಂದ್ಯಾಟದ ಬಾಲಕ ಬಾಲಕಿಯರ ವಿಭಾಗದಲ್ಲಿ ವಗ್ಗ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರು. ಬಾಲಕರ ವಿಭಾಗದ ದ್ವಿತೀಯ ಸ್ಥಾನವನ್ನು ಶ್ರೀರಾಮ ಪ್ರೌಢ ಶಾಲೆ ಕಲ್ಲಡ್ಕ ಮತ್ತು ಬಾಲಕಿಯರ ವಿಭಾಗದ ದ್ವಿತೀಯ ಸ್ಥಾನವನ್ನು ವಿಟ್ಲದ ವಿಠಲ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪಡೆದುಕೊಂದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಕೆ ಸ್ವಾಗತಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಭಟ್ ನಿರೂಪಿಸಿದರು. ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ವಂದಿಸಿದರು.
