ಕೈಕಂಬ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಕರೆ ನೀಡಿದ ಬಂದ್‍ಗೆ ಅಡ್ಡೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನಾಕಾರರು ಟೈರ್‍ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.10vp addoor benki
ಉದ್ರಿಕ್ತರ ಗುಂಪೊಂದು ಬೆಳಿಗ್ಗೆ ಅಡ್ಡೂರು ಸೇತುವೆ ಬಳಿಗೆ ಆಗಮಿಸಿ ರಸ್ತೆ ಮಧ್ಯೆ ಟೈರ್‍ಗಳಿಗೆ ಬೆಂಕಿ ಹಚ್ಚಿ ವಾಹನಗಳ ಸಂಚಾರ ತಡೆಗೆ ಯತ್ನಿಸಿದರು. ಈ ಬಗ್ಗೆ ಮಾಹಿತಿ ಪಡೆದ ಬಜಪೆ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಉದ್ಯೋಗಿಗಳನ್ನು ಕರೆದೊಯ್ಯುವ ಖಾಸಗಿ ಸಂಸ್ಥೆಯೊಂದಕ್ಕೆ ಸೇರಿದ ಬಸ್ ಸಂಚರಿಸುತ್ತಿದ್ದಾಗ ಕೆಲವು ದುಷ್ಕರ್ಮಿಗಳ ಗುಂಪೊಂದು ಆಗಮಿಸಿ ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕೆಲವು ದುಷ್ಕರ್ಮಿಗಳನ್ನು ಚದುರಿಸಿ ಯಾವುದೇ ಅನಾಹುತ ನಡೆಯದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾದ್ದಾರೆ.
ಗುರುಪುರ ಕೈಕಂಬ ಹಾಗೂ ಬಿ.ಸಿ.ರೋಡ್‍ನಿಂದ ಅಡ್ಡೂರು, ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ತಡೆದು, ಅಂಗಡಿಮಂಗಟ್ಟುಗಳನ್ನು ಬಂದ್ ಮಾಡಿಸಲಾಗಿತ್ತು. ಬಹುತೇಕ ಅಂಗಡಿಮುಂಗಟ್ಟುಗಳು ಬಂದ್ ಆಗಿದ್ದು, ಬಸ್‍ಗಳು ರಸ್ತೆಗಿಳಿಯಲಿಲ್ಲ.

 

By Suddi9

Leave a Reply

Your email address will not be published. Required fields are marked *