ಮೈಸೂರು: ಈ ವರ್ಷದ ವಿಶ್ವವಿಖ್ಯಾತ ಮೈಸೂರು ದಸರಯನ್ನು ಇನ್ಫೋಸಿಸ್ ಫೌಂಡೇಶನ್‍ನ ಡಾ.ಸುಧಾಮೂರ್ತಿ ಅವರು ಉದ್ಘಾಟಿಸಲಿದ್ದಾರೆ. ದಸರಾ ಆಚರಣೆಯ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಮೈಸೂರಿನಲ್ಲಿ ಸಚಿವರು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು.

sudha-murthy
ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ಬಾರಿ ಕೊಡಗಿನಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಮಾದರಿಯಲ್ಲಿ ದಸರಾ ಆಚರಣೆ ಮಾಡಲಾಗುವುದು. ಎಂದಿನಂತೆ ಎಲ್ಲ ಕಾರ್ಯಕ್ರಮಗಳನ್ನೂ ಆಯೋಜನೆ ಮಾಡಲಾಗುವುದು. ಈ ಸಾಂಪ್ರದಾಯಿಕ ದಸರಾವನ್ನು ಇನ್ಫೋಸಿಸ್ ಫೌಂಡೇಶನ್ ಡಾ.ಸುಧಾ ಮೂರ್ತಿ ಅವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

By suddi9

Leave a Reply

Your email address will not be published. Required fields are marked *