ಬಂಟ್ವಾಳ: ದ.ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕಣ ಇಲಾಖೆ, ವಿದ್ಯಾಂಗ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ದ.ಕ ಜಿ ಪಂ ಹಿ ಪ್ರಾ ಕನ್ನಡ ಶಾಲೆ ಬೊಳಂತಿಮೊಗರು ಮತ್ತು ಸರಕಾರಿ ಪ್ರೌಢ ಶಾಲೆ ಬೊಳಂತಿಮೊಗರು ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಬುಧವಾರ ನಡೆಯಿತು.

kho kho (3)
ಈ ಪಂದ್ಯಾಟವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ವಿಟ್ಲ ಉದ್ಘಾಟಿಸಿದರು. ಸ್ಥಳೀಯ ಸದಸ್ಯ ಅಬ್ದುಲ್ ರಹಿಮಾನ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಯು, ವಿಟ್ಲ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಸದಸ್ಯರುಗಳಾದ ಇಂದಿರಾ ಅಡ್ಡಾಳಿ, ಲತಾ ಅಶೋಕ್ ಪೂಜಾರಿ ಮತ್ತು ಶ್ರೀ ಕೃಷ್ಣ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಶೈಲಜಾ ಕೆ ಟಿ ಭಟ್, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಜೂಲಿಯಾನಾ ಮೇರಿ ಲೋಬೊ ಇವರು ಭಾಗವಹಿಸಿದ್ದರು.

kho kho (2)
ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ವಿಶ್ವನಾಥ ನಾಯ್ತೊಟ್ಟು, ಸದಾಶಿವ ಆಚಾರ್ಯ ಕೈಂತಿಲ, ಜತ್ತಪ್ಪ ಗೌಡ ನಾಯ್ತೊಟ್ಟು, ಜಗದೀಶ್ಚಂದ್ರ ನಾಯ್ತೊಟ್ಟು, ವನಿತಾ ಮಾಮೇಶ್ವರ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಶಿಕ್ಷಕ ರಕ್ಷಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

kho kho (1)
ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಸಂಜೀವ ಹೆಚ್ ಸ್ವಾಗತಿಸಿದರು. ಶಿಕ್ಷಕ ವಿಠಲ ನಾಯಕ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ ವಂದಿಸಿದರು.

By Suddi9

Leave a Reply

Your email address will not be published. Required fields are marked *