ವಿಟ್ಲ: ಇಲ್ಲಿನ ಕಸಬಾ ಗ್ರಾಮದ ಅನಿಲಕಟ್ಟೆ ಅಂಗನವಾಡಿ ಸಹಾಯಕಿಯಾಗಿ ಸ್ಥಳೀಯ ನಿವಾಸಿ ಪರಿಶಿಷ್ಟ ಜಾತಿಗೆ ಸೇರಿದ ಮಮತಾ ಎಂಬ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈಗ ಅವರ ಬದಲಿಗೆ ಐದು ಕಿಲೋ ಮೀ. ದೂರದ ಮಹಿಳೆಯನ್ನು ನೇಮಕ ಮಾಡಿದ್ದಾರೆ. ಹಾಗೂ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಮಮತಾ ಅವರನ್ನು ಅಡ್ಡಿಪಡಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಆಕ್ರೋಶಗೊಂಡು ಅಂಗನವಾಡಿಗೆ ಬೀಗ ಜಡಿದು ಪ್ರತಿಭಟಿಸುತ್ತಿದ್ದಾರೆ. ಈಗಾಗಲೇ ಸ್ಥಳಿಯರು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಗೆ ಮನಿವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ತಿಳಿಸಿದಂತೆ ಅಂಗನವಾಡಿ ಸಹಾಯಕಿಯಾಗಿ ಮಮತಾ ಅವರನ್ನು ನೇಮಕ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಂಗನವಾಡಿಗೆ ಮಕ್ಕಳನ್ನು ಕಳುಹಿಸದೇ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

