ವಿಟ್ಲ :ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ವಿಟ್ಲ ಮಾದರಿ ಶಾಲಾ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಮೋಹನ ಕಾಯರ್‍ಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅವರು ಸಂಘದ ಸದಸ್ಯರಿಗೆ ಶೇಕಡಾ 20 ಡಿವಿಡೆಂಡ್ ಘೋಷಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದ ಕ ಹಾಲು ಒಕ್ಕೂಟ ಮಂಗಳೂರು ಇದರ ವಿಸ್ತರಣಾಧಿಕಾರಿ ಪ್ರತಿಭಾ ಶೆಟ್ಟಿ ಸರಕಾರದ ಅನುದಾನದ ಮಾಹಿತಿ ನೀಡಿದರು.

2 (1)
ನಿರ್ದೇಶಕರುಗಳಾದ ಗೋಪಾಲ ಎಂ, ಲಿಂಗಪ್ಪ ನಾಯ್ಕ, ಗಣೇಶ್ ರೈ, ಕೃಷ್ಣ ಭಟ್ ಎಸ್, ಜಯರಾಮ ಬಲ್ಲಾಳ್, ಗಿರಿಜ ಮತ್ತು ರೇವತಿ ವೇದಿಕೆಯಲ್ಲಿದ್ದರು. ತುಳಸಿ ಪ್ರಾರ್ಥಿಸಿದರು. ಕಾರ್ಯದರ್ಶಿ ರಾಧಾಕೃಷ್ಣ ನಾಯಕ್ ಸ್ವಾಗತಿಸಿ ಲೆಕ್ಕ ಪತ್ರ ಮಂಡಿಸಿದರು. ಉಪಾಧ್ಯಕ್ಷ ಕೆ ಐ ಸಿಬ್ರಹ್ಮಣ್ಯ ಭಟ್ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *