ವಿಟ್ಲ:ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ(ಆಡಳಿತ) ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರವಲಯ ಮತ್ತು ವಿದ್ಯಾದಾಯಿನಿ ಸಮೂಹ ಶಿಕ್ಷಣ ಸಂಸ್ಥೆಗಳು ಸುರತ್ಕಲ್ ಮಂಗಳೂರು ಇವರ ಸಹಯೋಗದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹೈಸ್ಕೂಲ್ ವಿಭಾಗದ ಗಝಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರೀವಿದ್ಯಾ ಪಾದೆಕಲ್ಲು, ಈಕೆ ಕರೋಪಾಡಿ ಗ್ರಾಮದ ಪಾದೆಕಲ್ಲು ಕುಮಾರ ಸುಬ್ರಹ್ಮಣ್ಯ ಪಿ.ಎನ್ ಹಾಗೂ ದಿವ್ಯ ಕೆ ಎಸ್ ಇವರ ಸುಪುತ್ರಿ.
