ಬಂಟ್ವಾಳ: ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳು ಸಾಧಕರಿಗೆ ನೀಡುವ ‘ಚಾವಡಿ ತಮ್ಮನ’ ಗೌರವಕ್ಕೆ ಇಲ್ಲಿನ ತುಳು ಲಿಪಿ ಶಿಕ್ಷಕ ಬಿ.ತಮ್ಮಯ ಇವರು ಆಯ್ಕೆಯಾಗಿದ್ದಾರೆವಿದೇ 22ರಂದು ಅಪರಾಹ್ನ 3.30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳುಭವನದ ‘ಸಿರಿ ಚಾವಡಿಯಲ್ಲಿ’ ಈ ಗೌರವ ಪ್ರಧಾನ ಕಾರ್ಯಕ್ರಮ ನಡೆಯಲಿದೆ.
ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ.ಬಿ., ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ, ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ನಿವೃತ್ತ ಮುಖ್ಯಶಿಕ್ಷಕ ಮಹಾಬಲೇಶ್ವರ ಟಿ.ಹೆಬ್ಬಾರ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಚಾಲಕ ಎ.ಗೋಪಾಲ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
