ವಿಟ್ಲ: ಇಲ್ಲಿನ ರೋಟರಿ ಕ್ಲಬ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ವತಿಯಿಂದ ವಿಶ್ವ ಮಾದಕ ವಿರೋದ ದಿನಾಚರಣೆ ಅಂಗವಾಗಿ ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ `ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ವಿಟ್ಲ ವಲಯದ ಅಧ್ಯಕ್ಷ ಬಾಲಕೃಷ್ಣ ಕಾರಂತ ಎರುಂಬು ಇವರು ಉದ್ಘಾಟಿಸಿದರು.

svasthya sankalpa
ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಮಲೇರಿಯಾ ಪರಿವೀಕ್ಷಕ ಜಯರಾಮ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಸ್ವಾಗತಿಸಿದರು. ವಿಟ್ಲ ವಲಯ ಮೇಲ್ವಿಚಾರಕಿ ಪ್ರೇಮಾ ಪ್ರಸ್ತಾವಿಸಿದರು. ಸೇವಾ ಪ್ರತಿನಿಧಿ ವಂದಿಸಿ ನಿರೂಪಿಸಿದರು. ಪ್ರಕಾಶ್ ಕೋಡಿ ಸಹಕರಿಸಿದರು.

By suddi9

Leave a Reply

Your email address will not be published. Required fields are marked *