ಜಮ್ಮು ಕಾಶ್ಮೀರ : ಒಂದೆಡೆ ಪಾಕ್ ಗಡಿತಂಟೆಯಿಂದ ಕಂಗಾಲಾದ ಪಾಕಿಸ್ತಾನಕ್ಕೆ ಇತ್ತೀಚೆಗೆ ವರುಣನ ತಂಟೆಯೂ ಜೋರಾಗಿದೆ. ಜಮ್ಮು ಕಾಶ್ಮೀರದಲ್ಲಿ ಉಂಟಾದ ಭಾರೀ ಮಳೆಗೆ 9 ಮಂದಿ ಯೋಧರು ನೀರು ಪಾಲಾದ ಘಟನೆ ಸೆ.6ರ ಬೆಳಿಗ್ಗೆ ನಡೆದಿದೆ.
ಇವರು ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆಗೆಂದು ದೋಣಿಯಲ್ಲಿ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಐದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನತೆ ತತ್ತರಿಸಿದ್ದಾರೆ. ಕೆಲವೆಡೆ ಮಳೆಯ ಅಬ್ಬರಕ್ಕೆ ಪ್ರವಾಹ ಉಂಟಾಗಿದೆ.
ಕಳೆದ ಕೆಲ ದಿನಗಳಿಂದ ಕಣಿವೆ ರಾಜ್ಯದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು-ಉದಮ್, ಕತಾರ ರೈಲು ಸಂಪರ್ಕ ಸ್ಥಗಿತಗೊಂಡಿದೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಸ್ವತಃ ಕಾಶ್ಮೀರಕ್ಕೆ ತೆರಳಿದ್ದು ಪ್ರವಾಹ ಪರಿಸ್ಥಿತಿಯನ್ನು ಅವಲೋಕನ ನಡೆಸುತ್ತಿದ್ದಾರೆ.







